ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರ ವ್ಯಾಪಕ ಚರ್ಚೆಯಾಗುತ್ತಿದೆ. ಯತೀಂದ್ರ ವೈರಲ್ ವಿಡಿಯೋದಲ್ಲಿ ಮಹದೇವ್..ಮಹದೇವ್..ಎಂದು ಹೇಳುತ್ತಿದ್ದು, ಆ ಮಹಾದೇವ್ ಯಾರು ಎಂಬ ಕುತೂಹಲ ಎಲ್ಲರಲ್ಲಿದೆ.
ಮಹದೇವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರ ಸಂಬಂಧಿ ಆಗಿದ್ದಾರೆ. ಹೌದು, ಅವರು ಮೂಲತಹ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಸಿಎಂ ಸಿದ್ದರಾಮಯ್ಯರ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ.ಮಹದೇವ್ ಅವರು ಯತೀಂದ್ರ ಅವರ ಆಪ್ತರಾಗಿದ್ದಾರೆ ಎನ್ನಲಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಸಿಎಂ ಸಿದ್ದರಾಮಯ್ಯರ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಿಸಿದ್ದಾರೆ.
ಏನಿದು ವಿವಾದ..?
ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ಯತೀಂದ್ರ ಜನ ಸಂಪರ್ಕ ಸಭೆ ನಡೆಸಿದ್ದು, ಎಲ್ಲರ ಮನವಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಸೂಚನೆ ನೀಡಿದ ಯತೀಂದ್ರ ಸಮಸ್ಯೆ ಪರಿಹಾರಕ್ಕೆ ಯತ್ನಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಕರೆ ಮೂಲಕ ಯತೀಂದ್ರ ಮಾತನಾಡಿದ್ದಾರೆ. ಅಪ್ಪ ಹೇಳಿ ಎಂದು ಮಾತು ಆರಂಭಿಸುವ ಅವರು ತಾನು ನೀಡಿದ ಪಟ್ಟಿಯ ಬಗ್ಗೆ ಮಾತನಾಡಿ ವಿವೇಕಾನಂದರ ಹೆಸರು ಪ್ರಸ್ತಾಪಿಸಿ ಇದಕ್ಕೆ ಯಾರು ಎಂದು ಕೇಳಿದ್ದಾರೆ. ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹಾದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯರಿಗೆ ತಿಳಿಸುತ್ತಾರೆ. ನಂತರ ಮಹದೇವ ಜೊತೆ ಮಾತನಾಡಿ, ಯಾಕೆ ಯಾವುದ್ಯಾವುದೋ ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
https://twitter.com/hd_kumaraswamy/status/1724998929090273653?ref_src=twsrc%5Etfw%7Ctwcamp%5Etweetembed%7Ctwterm%5E1724998929090273653%7Ctwgr%5E53cfafce7a659bddfe5d266fed938df6fb114f1f%7Ctwcon%5Es1_&ref_url=https%3A%2F%2Fkannadadunia.com%2Flive-news%2Fcm-siddaramaiahs-son-yathindra-asked-for-bribe-for-transfer-former-cm-hdk-another-bombshell%2F