HomeIndiaನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಿಸಿದ ಸುಪ್ರೀಂ ಕೋರ್ಟ್; 24 ಗಂಟೆಯೊಳಗೆ ದೆಹಲಿ ಮೇಯರ್...

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಿಸಿದ ಸುಪ್ರೀಂ ಕೋರ್ಟ್; 24 ಗಂಟೆಯೊಳಗೆ ದೆಹಲಿ ಮೇಯರ್ ಚುನಾವಣೆ ನಡೆಸಲು ಆದೇಶ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಅವರಿಂದ ನಾಮನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ 24 ಗಂಟೆಯಲ್ಲೇ ದೆಹಲಿ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲವಾಗಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.

ಬಿಜೆಪಿ ನಾಯಕರನ್ನು ಮೇಯರ್ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ನಾಗರಿಕ ಸಂಸ್ಥೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದ್ದು, ಎರಡು ತಿಂಗಳ ಅವಧಿಯಲ್ಲಿ ಮೇಯರ್ ಚುನಾವಣೆಯನ್ನು ಮೂರು ಬಾರಿ ಮುಂದೂಡಲಾಗಿದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಅಥವಾ MCD ಗೆ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ AAP ಬಿಜೆಪಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು.

ಲೆಫ್ಟಿನೆಂಟ್‌ ಗವರ್ನರ್‌ ನೇಮಕ ಮಾಡಿರುವ ದಿಲ್ಲಿಯ ನಾಗರಿಕ ಮಂಡಳಿಯ ಸದಸ್ಯರು ಮೇಯರ್‌ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಇಂದು ಹೇಳಿದೆ. ಈ ಆದೇಶ ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವಿನ ಜಗಳಕ್ಕೆ ಅಂತ್ಯ ಹಾಡಬಹುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular