HomeLatest NewsBREAKING : ಪೊಲೀಸರ ಅನುಮತಿ ಪಡೆಯದೇ ಬಿಗ್’ಬಾಸ್ -12 ಆರಂಭ : ಮತ್ತೊಂದು ನೋಟಿಸ್ ಜಾರಿ.!

BREAKING : ಪೊಲೀಸರ ಅನುಮತಿ ಪಡೆಯದೇ ಬಿಗ್’ಬಾಸ್ -12 ಆರಂಭ : ಮತ್ತೊಂದು ನೋಟಿಸ್ ಜಾರಿ.!

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12 ಆರಂಭದಲ್ಲೇ ಹಲವು ಸಂಕಷ್ಟ ಎದುರಿಸುತ್ತಿದೆ. ಕೆಲವೇ ದಿನಗಳಲ್ಲಿ ಶೋ ಬಂದ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ನೋಟಿಸ್ ನೀಡಿತ್ತು, ಆದರೆ ಇದೀಗ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಲು ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ನೋಟಿಸ್ ನೀಡಲಾಗಿದೆ. ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋವನ್ನು ರಾಮನಗರದ ಬಿಡದಿ ಬಳಿಯ ೩೫ ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಹಾಕಿ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಪೊಲೀಸರಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕುವಂತೆ ವರದಿಯಾಗಿದೆ. ಅನಧೀಕೃತವಾಗಿ ಇಲ್ಲಿ ಶೋ ನಡೆಸಲಾಗುತ್ತಿದೆ ಎಂದುಈ ಹಿಂದೆ ವಿದ್ಯುತ್ ಕಡಿತಕ್ಕೂ ಸೂಚನೆ ನೀಡಲಾಗಿತ್ತು. ಇದೀಗ ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಮತ್ತೊಂದು ನೋಟಿಸ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕನ್ನಡ ಬಿಗ್ ಬಾಸ್ ಶೋಗೆ ಮತ್ತೊಂದು ಸಮಸ್ಯೆ ಎದುರಾಗಿದೆ.
ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಹೌಸ್ ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು.

ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಕಾರಣಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ. ಬಿಗ್ ಬಾಸ್ ಹೌಸ್ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular