HomeKarnatakaಲಾಯರ್ ಜಗದೀಶ್ ಮೇಲೆ ಹಲ್ಲೆ: ಗಾಳಿಯಲ್ಲಿ ಗುಂಡು

ಲಾಯರ್ ಜಗದೀಶ್ ಮೇಲೆ ಹಲ್ಲೆ: ಗಾಳಿಯಲ್ಲಿ ಗುಂಡು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ ಮತ್ತು ವಕೀಲ ಕೆ.ಎಂ. ಜಗದೀಶ್ ಕುಮಾರ್ ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು, ಈ ವೇಳೆ ವಕೀಲರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಶುಕ್ರವಾರ ರಾತ್ರಿ ಕೊಡಿಗೇನಹಳ್ಳಿಯಲ್ಲಿ ನಡೆದಿದೆ.

ಅಣ್ಣಮ್ಮ ದೇವಿ ಉತ್ಸವದ ವಿಷಯವಾಗಿ ಸ್ಥಳೀಯರು ಮತ್ತು ಜಗದೀಶ್ ನಡುವೆ ಜಗಳವಾಗಿದ್ದು, ರೊಚ್ಚಿಗೆದ್ದ ಸ್ಥಳೀಯರು ಜಗದೀಶ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ಮೇಲೆ ಹಲ್ಲೆ ನಡೆಸಲಾಗಿದೆ. ಆತ್ಮ ರಕ್ಷಣೆಗಾಗಿ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಜಗದೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನಡೆಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಗಿನಿಂದ ರಕ್ತ ಸೋರುತ್ತಿದ್ದರೂ ಜಗದೀಶ್ ಫೇಸ್ ಬುಕ್ ಲೈವ್ ಗೆ ಬಂದು ಆದ ಘಟನೆಯ ಬಗ್ಗೆ ತಿಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular