ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಜೈಲುಪಾಲಾಗಿದ್ದಾರೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಜೈಲು ಸೇರಿ ಜಾಮೀನು ಮೇಲೆ ಬಿಡಿಗಡೆಯಾಗಿದ್ದ ರಜತ್ ಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು. ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ರಹಿತ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆ ಪೊಲೀಸರು ರಜತ್ ನನ್ನು ಬಂಧಿಸಿ ಕೋರ್ಟ್ ಗೆ ಹಾಅಜರುಪಡಿಸಿದ್ದರು.
ಈ ವೇಳೆ 24ನೇ ಎಸಿಎಂಎಂ ಕೋರ್ಟ್ ರಜತ್ ಗೆ ಮತ್ತೆ 14 ದಿನಗಳ ಕಾಲ ಏ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಜತ್ ಮತ್ತೆ ಜೈಲುಪಾಲಾಗಿದ್ದಾರೆ.