HomeLive NewsBREAKING NEWS: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್

BREAKING NEWS: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ರಜತ್ ಗೆ ಸೂಚಿಸಿತ್ತು. ಆದರೆ ರಜತ್ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆ ಪೊಲೀಸರು ರಜತ್ ನನ್ನು ಮತ್ತೆ ಬಂಧಿಸಿದ್ದಾರೆ.

24ನೇ ಎಸಿಎಂಎಂ ಕೋರ್ಟ್ ಗೆ ರಜತ್ ನನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾಗಿದ್ದ ರಜತ್ ಹಾಗೂ ವಿನಯ್ ಗೌಡ ಇಬ್ಬರೂ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular