HomeEntertainment‘ಬಿಗ್ ಬಾಸ್’ ಖ್ಯಾತಿಯ ನಟಿ ಶುಭಶ್ರೀ ಕಾರು ಅಪಘಾತ

‘ಬಿಗ್ ಬಾಸ್’ ಖ್ಯಾತಿಯ ನಟಿ ಶುಭಶ್ರೀ ಕಾರು ಅಪಘಾತ

ಹೈದರಾಬಾದ್: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಶುಭಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ನಾಗಾರ್ಜುನ ಸಾಗರದ ಮಾಚೆರ್ಲಾ ಬಳಿ ಬೈಕ್ ಸವಾರನೊಬ್ಬ ಮದ್ಯದ ಅಮಲಿನಲ್ಲಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದರೂ ನಟಿಗೆ ಯಾವುದೇ ತೊಂದರೆಯಾಗಿಲ್ಲ.

ಅಪಘಾತದಲ್ಲಿ ಬೈಕ್ ಕೂಡ ಜಖಂಗೊಂಡಿದೆ. ಹೆಲ್ಮೆಟ್ ಹಾಕಿಕೊಂಡಿದ್ದರಿಂದ ಬೈಕ್ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ. ಶುಭಶ್ರೀ ಕೂಡ ಅಪಾಯದಿಂದ ಪಾರಾಗಿದ್ದಾರೆ. ಶುಭಶ್ರೀ ಪ್ರಸ್ತುತ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಚಿತ್ರತಂಡಕ್ಕೆ ಸೇರಿದ್ದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular