ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ‘ಬಿಗ್ ಬಾಸ್’ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ.
‘ಬಿಗ್ ಬಾಸ್’ ಮನೆಯನ್ನು ಗೇಟ್ ಗೆ ಬೀಗ ಜಡಿದು ಬಂದ್ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಈ ಬೆಳವಣಿಗೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ ಎಂದು ತಿಳಿಸಿದ್ದಾರೆ.
‘ಬಿಗ್ ಬಾಸ್’ ಶೋ ನಡೆಯುತ್ತಿರುವ ಸ್ಟುಡಿಯೋಗೆ ನೋಟಿಸ್ ನೀಡಿರುವ ವಿಚಾರದ ಬಗ್ಗೆ ಮಾಹಿತಿ ಪಡೆದುಕೊಂಡಾಗ ರಾಮನಗರ ಪ್ರಾದೇಶಿಕ ಕಚೇರಿಯಿಂದ 2024ರಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದರು. ನಿಯಮ ಪಾಲಿಸದ ಕಾರಣ ಈಗ ಮತ್ತೆ ನೋಟಿಸ್ ನೀಡಲಾಗಿದೆ. ಎಸ್‌ಟಿಪಿ ಕಾರ್ಯ ನಿರ್ವಹಣೆ ಸೇರಿದಂತೆ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಜನರೇಟರ್ ಸೆಟ್ ಗಳು ಕೂಡ ಇದ್ದು ಅವುಗಳಿಗೆ ಅನುಮತಿ ಪಡೆದಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.