HomeEntertainmentಬಿಗ್‌ಬಾಸ್ ಮನೆಯಲ್ಲಿ ಗಂಧರ್ವರು-ರಾಕ್ಷಸರು’ ಟಾಸ್ಕ್ ವೇಳೆ ಸಂಗೀತಾ ಭಟ್‌ಗೆ ಉಸಿರಾಟದ ಸಮಸ್ಯೆ; ಆಸ್ಪತ್ರೆಗೆ ದಾಖಲು

ಬಿಗ್‌ಬಾಸ್ ಮನೆಯಲ್ಲಿ ಗಂಧರ್ವರು-ರಾಕ್ಷಸರು’ ಟಾಸ್ಕ್ ವೇಳೆ ಸಂಗೀತಾ ಭಟ್‌ಗೆ ಉಸಿರಾಟದ ಸಮಸ್ಯೆ; ಆಸ್ಪತ್ರೆಗೆ ದಾಖಲು

ಬಿಗ್‌ಬಾಸ್ ಮನೆಯಲ್ಲಿ ನಡೆಯುತ್ತಿರುವ ‘ಗಂಧರ್ವರು ಮತ್ತು ರಾಕ್ಷಸರು’ ಟಾಸ್ಕ್ ವೇಳೆ ಸ್ಪರ್ಧಿ ಸಂಗೀತಾ ಭಟ್ ಅಸ್ವಸ್ಥರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಟಾಸ್ಕ್ ನಡೆಯುತ್ತಿದ್ದ ವೇಳೆ ಸಂಗೀತಾ ಭಟ್ ಅಸ್ತವ್ಯಸ್ತಗೊಂಡಿದ್ದಾರೆ. ಈ ವೇಳೆ ಮನೆಯ ಇತರ ಸ್ಪರ್ಧಿಗಳು ಅವರನ್ನು ಎತ್ತಿಕೊಂಡು ಕನ್ಫೆಷನ್ ರೂಮ್‌ಗೆ ಕರೆದುಕೊಂಡು ಬಂದಿದ್ದಾರೆ. ಈ ದೃಶ್ಯಗಳ ವಿಡಿಯೋ ಕ್ಲಿಪ್‌ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಗೀತಾ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾವ್ಯಾ ಮತ್ತು ಸೌಂದರ್ಯಾ ಮನೆಯಲ್ಲಿದ್ದ ಇನ್ಹೇಲರ್‌ಗಾಗಿ ಹುಡುಕಾಡಿದ್ದಾರೆ. ಆದರೆ ಇನ್ಹೇಲರ್ ಸಿಗದ ಕಾರಣ ಕೂಡಲೇ ವೈದ್ಯಕೀಯ ನೆರವು ಪಡೆಯಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗಷ್ಟೇ ವೀಕೆಂಡ್ ಎಪಿಸೋಡ್‌ನಲ್ಲಿ ಸಂಗೀತಾ ಭಟ್ ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ವೀಕ್ಷಕರ ಮತಗಳ ಆಧಾರದ ಮೇಲೆ ಅವರು ಸೇವ್ ಆಗಿದ್ದರು. ಆಗಲೂ ಅವರ ಆರೋಗ್ಯದ ಬಗ್ಗೆ ಚರ್ಚೆ ನಡೆದಿತ್ತು.

ಇದೀಗ ಸಂಗೀತಾ ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಹೊರಬಿದ್ದಿದೆ. ಚಿಕಿತ್ಸೆ ಪಡೆದ ಬಳಿಕ ಅವರು ಮತ್ತೆ ಬಿಗ್‌ಬಾಸ್ ಮನೆಗೆ ಮರಳುತ್ತಾರಾ ಅಥವಾ ಅನಾರೋಗ್ಯದ ಕಾರಣ ಆಟದಿಂದ ಹೊರಗುಳಿಯುತ್ತಾರಾ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ಈ ವಾರದ ನಾಮಿನೇಷನ್‌ನಿಂದಲೂ ಸಂಗೀತಾ ಸೇಫ್ ಆಗಿದ್ದಾರೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಮತ್ತೆ ಮನೆಗೆ ಬಂದು ಆಟ ಮುಂದುವರಿಸಲಿ ಎಂದು ಅವರ ಅಭಿಮಾನಿಗಳು ಆಶಿಸುತ್ತಿದ್ದಾರೆ.ಈ ಹಿಂದೆ ಎರಡನೇ ವಾರದಲ್ಲೇ ನಿರ್ದೇಶಕ ಓಂ ಪ್ರಕಾಶ್ ರಾವ್ ಅನಾರೋಗ್ಯದ ಕಾರಣ ಬಿಗ್‌ಬಾಸ್ ಆಟದಿಂದ ಹೊರಬಂದಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular