HomeAgricultureBIGG NEWS: ಕರಾವಳಿ ಭಾಗದಲ್ಲಿ ಚಂಡಮಾರುತದ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

BIGG NEWS: ಕರಾವಳಿ ಭಾಗದಲ್ಲಿ ಚಂಡಮಾರುತದ ಮುನ್ಸೂಚನೆ; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳಲ್ಲಿ ಚಂಡಮಾರುತ ಉಂಟಾಗಲಿದ್ದು, ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೆರೆಪೀಡಿತ, ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ತಿಳಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ. ಅಲ್ಲದೇ ಸಾರ್ವಜನಿಕರು, ಪ್ರವಾಸಿಗರು ಕೂಡ ಸಮುದ್ರ, ನದಿ ನೀರಿಗಿಳಿಯದಂತೆ ಎಚ್ಚರ ವಹಿಸುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular