ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ (School textbook revise)ಗೆ ರಾಜ್ಯ ಸರ್ಕಾರ (State Government) ಮುಂದಾಗಿದ್ದು, ಮುಖ್ಯವಾಗಿ 3 ಪಠ್ಯಕ್ಕೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶಾಲಾ ಪಠ್ಯಪುಸ್ತಕಗಳಲ್ಲಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರೋಹಿತ್ ಚಕ್ರತೀರ್ಥ ಸಮಿತಿಯ ನೇತೃತ್ವದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿತ್ತು. ಹೊಸ ಪಠ್ಯಪುಸ್ತಕಗಳಲ್ಲಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳನ್ನು ಸೇರಿಸಲಾಗಿತ್ತು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಪಠ್ಯಗಳಿಗೆ ಕತ್ತರಿ ಹಾಕಲು ಮುಂದಾಗಿದೆ.