HomeKarnatakaBIGG NEWS : ಮಾಜಿ `ಸಚಿವ ಎಸ್.ಟಿ. ಸೋಮಶೇಖರ್’ ಕಾಂಗ್ರೆಸ್ ಸೇರ್ಪಡೆ ?

BIGG NEWS : ಮಾಜಿ `ಸಚಿವ ಎಸ್.ಟಿ. ಸೋಮಶೇಖರ್’ ಕಾಂಗ್ರೆಸ್ ಸೇರ್ಪಡೆ ?

ಬೆಂಗಳೂರು : ಲೋಕಸಭೆ ಚುನಾವಣೆಗೆ ಸದ್ದಿಲ್ಲದೇ ತಯಾರಿ ನಡೆಸಿರುವ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಹಲವು ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸಿದೆ ಎನ್ನಲಾಗ್ತಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಮುಂಬರುವ ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದೆ. 20 ಸ್ಥಾನಗಳನ್ನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಕಾಂಗ್ರೆಸ್ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ.

ಈ ಪೈಕಿ ಮಾಜಿ ಸಚಿವ ಎಸ್‌. ಟಿ. ಸೋಮಶೇಖರ್‌ ಅವರನ್ನ ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆದಿದೆ ಎನ್ನಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್‌ ನೀಡುವ ಚಿಂತನೆ ನಡೆದಿದ್ದು, ಯಶವಂತಪುರ ಕ್ಷೇತ್ರಕ್ಕೆ ಎಸ್‌ ಟಿ ಸೋಮಶೇಖರ್‌ ಪುತ್ರನಿಗೆ ಟಿಕೆಟ್‌ ನೀಡುವ ಆಫರ್‌ ನ್ನು ಕಾಂಗ್ರೆಸ್ ನೀಡಿದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಆಫರ್ ಅನ್ನು ಒಪ್ಪಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ? ಅಥವಾ ಆಫರ್ ತಿರಸ್ಕರಿಸಿ ಬಿಜೆಪಿಯಲ್ಲಿ ಇರುತ್ತಾರಾ ? ಎಂಬುದು ಕಾದು ನೋಡಬೇಕು.

For Latest News Updates, Join Our Whatsapp Community🚩
RELATED ARTICLES

Most Popular