HomeKarnatakaBIGG NEWS : ಮಹಾರಾಷ್ಟ್ರದಲ್ಲಿ ಹಿಂಸಾಚಾರ : ಕರ್ನಾಟಕದ 10 ಬಸ್ ಗಳಿಗೆ ಬೆಂಕಿ

BIGG NEWS : ಮಹಾರಾಷ್ಟ್ರದಲ್ಲಿ ಹಿಂಸಾಚಾರ : ಕರ್ನಾಟಕದ 10 ಬಸ್ ಗಳಿಗೆ ಬೆಂಕಿ

ಬೆಳಗಾವಿ : ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಸೇರಿದ 10 ಬಸ್ಸಿಗೆ ಬೆಂಕಿ ಹಚ್ಚಲಾಗಿದ್ದು, 20 ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರದ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದಗಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇದರಿಂದ ಕೋಪಗೊಂಡ ಹೋರಾಟಗಾರರು ಹೆದ್ದಾರಿಯಲ್ಲಿ ಸಿಕ್ಕ ಸಿಕ್ಕ ಬಸ್ಸುಗಳಿಗೆ ಕಲ್ಲು ತೂರಿದ್ದಾರೆ. ಪ್ರಯಾಣಿಕರು ಬಸ್ಸಿನಲ್ಲಿ ಇರುವಾಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಘು ಲಾಠಿ ಪ್ರಹಾರ ನಡೆಸಿ ಹಾಗೂ ಆಶ್ರವಾಯು ಸಿಡಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಕೆಲ ಸುತ್ತಿನ ಗುಂಡುಗಳನ್ನೂ ಹಾರಿಸಲಾಗಿದೆ. ಜನರು ಶಾಂತಿ ಕಾಪಾಡುವಂತೆ ಸಿಎಂ ಏಕನಾಥ ಶಿಂಧೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular