HomeKarnatakaBIGG NEWS : ಆಗಸ್ಟ್ 24 ರಂದು `4ನೇ ಗ್ಯಾರಂಟಿ’ ಯೋಜನೆ ಜಾರಿ :...

BIGG NEWS : ಆಗಸ್ಟ್ 24 ರಂದು `4ನೇ ಗ್ಯಾರಂಟಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಈಗಾಗಲೇ 3 ಗ್ಯಾರಂಟಿ ಜಾರಿಯಾಗಿವೆ. ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular