BIGG NEWS : ಲೋಕಸಭೆ ಚುನಾವಣಾ ಕಣದಿಂದ 8 ಸಂಸದರು ಸ್ವಯಂ ನಿವೃತ್ತಿ : ಯತ್ನಾಳ್ ಮಹತ್ವದ ಹೇಳಿಕೆ

ವಿಜಯಪುರ : ಮುಂದಿನ ಲೋಕಸಭೆ ಚುನಾವಣಾ ಕಣದಿಂದ 8 ಹಾಲಿ ಸಂಸದರು ಸ್ವಯಂ ನಿವೃತ್ತಿ ಘೋಷಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಹಾವೇರಿಯ ಉದಾಸಿ, ಡಿ.ವಿ. ಸದಾನಂದಗೌಡ ಸೇರಿದಂತೆ 8 ಮಂದಿ ಸಂಸದರು ಸ್ವಯಂ ಪ್ರೇರಣೆಯಿಂದ ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ 8 ಸಂಸದರು ಸ್ವಯಂ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read