HomeKarnatakaBIGG NEWS : ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಮುಲಾಜಿಲ್ಲದೇ ಕ್ರಮ : ಡಿಸಿಎಂ ಡಿ.ಕೆ....

BIGG NEWS : ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಮುಲಾಜಿಲ್ಲದೇ ಕ್ರಮ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಕುಮಾರಕೃಷಾ ಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದ ಸೌಂದರ್ಯ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಯಾರೂ ಕೂಡ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ, ಡಿಸಿಎಂ, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರೂ ಫ್ಲೆಕ್ಸ್, ಬ್ಯಾನರ್ ಕಟ್ಟುವಂತಿಲ್ಲ. ಸರ್ಕಾರಿ ಜಾಹೀರಾತು ಪ್ರಕಟಿಸುವ ಬಗ್ಗೆ ಶೀಘ್ರದಲ್ಲೇ ನಿಯಮ ರೂಪಿಸುತ್ತೇವೆ. ಫ್ಲೆಕ್ಸ್, ಬ್ಯಾನರ್ ಹಾಕದಂತೆ ವೈಯಕ್ತಿಕವಾಗಿ ಮನವಿ ಮಾಡುತ್ತೇನೆ. ಧಾರ್ಮಿಕ, ರಾಜಕೀಯ, ಸಾಮಾಜಿಕ ಫ್ಲೆಕ್ಸ್ ಹಾಕಿದವರ ಮೇಲೆ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular