HomeKarnatakaBIGG NEWS : ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಆಚರಣೆ ವೇಳೆ `ಡಿ.ಜೆ.ಸಿಸ್ಟಂ’ ಬಳಕೆ...

BIGG NEWS : ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್ ಆಚರಣೆ ವೇಳೆ `ಡಿ.ಜೆ.ಸಿಸ್ಟಂ’ ಬಳಕೆ ನಿಷೇಧ

ಶಿವಮೊಗ್ಗ : ಗಣೇಶ ಚತುರ್ಥಿ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 18ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ. 28 ರಿಂದ ಸೆ. 30 ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ ಸಿಸ್ಟಂ ಬಳಕೆ ನಿರ್ಬಂಧಗೊಳಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಆದೇಶಿಸಿದ್ದಾರೆ.

ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪ ಬಳಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವಕಾಶ ನೀಡಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಪ್ಪದ ಮೂಲಕ ಗಣೇಶ ವಿಸರ್ಜನೆ ಮಾಡುವ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಪ್ಪಿಸಲು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಹಾಗೂ ಕಡ್ಡಾಯವಾಗಿ ಲೈಫ್-ಜಾಕೆಟ್, ನುರಿತ ಈಜುಗಾರರು ಇದ್ದು ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular