ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣದ ತನಿಖೆಯನ್ನು ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಎಲ್ಲಾ ಆಯಾಮಗಳನ್ನೂ ತನಿಖೆ ಮಾಡುತಿದ್ದೇವೆ. ಪ್ರಕರಣ ಸಂಬಂಧ ಆಂತರಿಕ ತನಿಖೆ ನಡೆಸಲಾಗುತ್ತಿದೆ.ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ತನಿಖೆ ಮಾಡುತ್ತಿದ್ದೇವೆ. ತನಿಖಾ ವರದಿಯನ್ನು ಸಿಎಂ, ಡಿಸಿಎಂಗೆ ಸಲ್ಲಿಸಲಾಗುವುದು ಎಂದರು.
ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆಗೆ ನಮ್ಮ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ.ಲ್ಯಾಬ್ ನಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.