BIGG NEWS : ಬಿಜೆಪಿ –ಜೆಡಿಎಸ್ ಮೈತ್ರಿ ವಿಚಾರ : ಸಿ.ಟಿ. ರವಿ ಹೇಳಿದ್ದೇನು ?

ಚಿಕ್ಕಮಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಮ್ಮ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ನಮ್ಮ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಹೈಕಮಾಂಡ್ ಮಟ್ಟದಲ್ಲಿ ನಡೆದಿದ್ದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ, ರಾಜಕಾರಣದಲ್ಲಿ ಯಾರೂ ಶತ್ರುಗಳು ಇಲ್ಲ, ಮಿತ್ರರೂ ಇಲ್ಲ. ರಾಜಕಾರಣ ಹರಿಯುವ ನೀರು. ಮೋದಿ ಅವರ ಜನಪರ ಕೆಲಸ ಮೆಚ್ಚಿ ಯಾರು ಬೇಕಾದ್ರೂ ಬರಬಹುದು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಸಂಬಂಧ ಈಗಾಗಲೇ ಮಾತುಕತೆಗಳು ನಡೆಯುತ್ತಿದ್ದು, ಇಂದು ಅಥವಾ ನಾಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ಭೇಟಿ ನೀಡಲಿದ್ದು, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮೈತ್ರಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read