HomeKarnatakaBIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ

BIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟದ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಇ 187 ಕೋಟಿ ರೂ. ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್ ಐ ಸೇವೆಗಳನ್ನು ಎಲ್ಲಾ ಫಲಾನುಭವಿಗಳಿಗೆ ಉಚಿತವಾಗಿ ಒದಗಿಸಲು ರಾಜ್ಯದ 15 ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್ ಐ ಸ್ಕ್ಯಾನ್ ಹಾಗೂ 5 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇವೆಗಳನ್ನು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular