BIGG NEWS : ಇಂದು ಕಾವೇರಿ ನೀರು ಹಂಚಿಕೆ ಸಂಬಂಧ ಮಹತ್ವದ ವಿಚಾರಣೆ : ರೈತರ ಚಿತ್ತ `ಸುಪ್ರೀಂಕೋರ್ಟ್’ ನತ್ತ!

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದ್ದು, ರಾಜ್ಯದ ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದದ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. CWMA ಆದೇಶ ತಡೆಕೋರಿ ಅರ್ಜಿ ಸಲ್ಲಿಸಿದೆ. ಇಂದು ಬೆಳಗ್ಗೆ 10.30ಕ್ಕೆ ನ್ಯಾ.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ.

ಸೆಪ್ಟೆಂಬರ್ 26 ತನಕ ತಮಿಳುನಾಡಿಗೆ ನಿತ್ಯವೂ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.  ವಸ್ತುಸ್ಥಿತಿ ಅರಿಯುವಲ್ಲಿ ಪ್ರಾಧಿಕಾರ ವಿಫಲವಾಗಿದೆ. ಒಳಹರಿವು ಕಡಿಮೆಯಾಗಿರುವುದರಿಂದ ನೀರು ಹರಿಸುವುದು ಕಷ್ಟವಾಗುತ್ತಿದೆ. ಪ್ರಾಧಿಕಾರದ ಹಿಂದಿನ ಎಲ್ಲ ಆದೇಶಗಳನ್ನು ನಾವು ಪಾಲಿಸಿದ್ದೇವೆ. ಹೀಗಾಗಿ ಪ್ರಾಧಿಕಾರದ ಪ್ರಸ್ತುತ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.

ನ್ಯಾ. ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಲಿದ್ದು, ಕರ್ನಾಟಕ ತನ್ನ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಲು ಮುಂದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read