HomeKarnatakaBIGG NEWS : ಶೀಘ್ರದಲ್ಲೇ `ಜಾತಿ ಗಣತಿ ವರದಿ’ ಸ್ವೀಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

BIGG NEWS : ಶೀಘ್ರದಲ್ಲೇ `ಜಾತಿ ಗಣತಿ ವರದಿ’ ಸ್ವೀಕಾರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಜಾತಿ ಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ ಸಲ್ಲಿಕೆಯಾಗಲಿದೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಂತರ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಜಾತಿ ಸಮೀಕ್ಷೆ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular