BIGG NEWS : ರಾಜ್ಯದಲ್ಲಿ `NEP’ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿಯೊಂದನ್ನು ರಚಿಸುವುದಾಗಿ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ನಡೆದ ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿ ತನ್ನದೇ ಆದ ಹೊಸ ಶಿಕ್ಷಣ ನೀತಿಯನ್ನು ರೂಪಿಸಲು ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳನ್ನು  ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯಗಳ ಮೇಲೆ ಹೇರುವ ಹುನ್ನಾರ ನಡೆದಿದೆ. ಆದರೆ ಬಹುಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಎನ್ ಇಪಿಯನ್ನು ಜಾರಿಗೊಳಿಸುವುದಿಲ್ಲ. ಆದರೆ ಅದನ್ನು ಸಂಪೂರ್ಣವಾಗಿ ತಿರಸ್ಕರಿಸುವುದಿಲ್ಲ. ಪುನರ್ ವಿಮರ್ಶೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read