BIGG NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯ ಸರ್ಕಾರವು ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ. ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

https://twitter.com/CMofKarnataka/status/1714676759281459567?ref_src=twsrc%5Etfw%7Ctwcamp%5Etweetembed%7Ctwterm%5E1714676759281459567%7Ctwgr%5E73b73f774aef46b1e0b05151c2a83e0f312361a4%7Ctwcon%5Es1_c10&ref_url=https%3A%2F%2Fapi-news.dailyhunt.in%2F

Image

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read