HomeKarnatakaBIGG NEWS : CM ಸಿದ್ದರಾಮಯ್ಯನವರೇ ನಮ್ಮ ಲೀಡರ್ ಎಂದು ಒಪ್ಪಿಕೊಂಡ ಡಿಕೆಶಿ!

BIGG NEWS : CM ಸಿದ್ದರಾಮಯ್ಯನವರೇ ನಮ್ಮ ಲೀಡರ್ ಎಂದು ಒಪ್ಪಿಕೊಂಡ ಡಿಕೆಶಿ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಿಎಂ ಅಧಿಕಾರ ಹಂಚಿಕೆ ವಿಚಾರದ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಮ್ಮ ಲೀಡರ್, ನಮ್ಮ ಕೆಲಸ ಏನು ಅದನ್ನು ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಜನರು ಸಾಮೂಹಿಕ ನಾಯಕತ್ವಕ್ಕೆ ಆಶೀರ್ವಾದ ಮಾಡಿದ್ದಾರೆ. ನಮಗೆ  ಅದು ಮುಖ್ಯ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೆ ಯಾವ ಅರ್ಜೆಂಟ್ ಇಲ್ಲ. ಸಿಎಂ ಸಿದ್ದರಾಮಯ್ಯ, ನನ್ನ ನೇತೃತ್ವದಲ್ಲಿ ಲೋಕಸಭೆ ಚುನಾವಣೆಗೆ ಹೋಗುತ್ತೇವೆ. ಸಿದ್ದರಾಮಯ್ಯ ನಮ್ಮ ಲೀಡರ್, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ನಾನು ಸೇರಿದಂತೆ ಎಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular