BIGG NEWS : ಗಲಭೆ ಎಬ್ಬಿಸುವವರ ವಿರುದ್ಧ ಖಡಕ್ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಶಿವಮೊಗ್ಗ : ಶಾಂತಿಯ ತೋಟದಲ್ಲಿ ಗಲಭೆ ಎಬ್ಬಿಸುವವರ ವಿರುದ್ಧ ಖಡಕ್ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ಬಡಾವಣೆಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.ಇದುವರೆಗೆ ಕಲ್ಲು ತೂರಾಟ ಪ್ರಕರಣದಲ್ಲಿ 60 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಕೋಮು ಗಲಭೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಗಲಭೆಕೋರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಶಾಂತಿಯುವಾಗಿ ಮಾಡಲಿ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read