BIGG NEWS : ಇಂದು ಸಚಿವರ ಜೊತೆಗೆ ಸಿಎಂ `ಬ್ರೇಕ್ ಫಾಸ್ಟ್ ಮೀಟಿಂಗ್’ : ತೀವ್ರ ಕುತೂಹಲ

ಬೆಂಗಳೂರು : ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ತೀವ್ರ ಕೂತುಹಲ ಮೂಡಿಸಿದೆ.

ಇಂದು ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದಿನ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಎಂ.ಬಿ.ಪಾಟೀಲ್, ಹೆಚ್.ಸಿ. ಮಹದೇವಪ್ಪ, ರಾಮಲಿಂಗ ರೆಡ್ಡಿ, ಕೆ.ಜೆ, ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಹೆಚ್. ಮುನಿಯಪ್ಪ, ಆರ್. ಬಿ. ತಿಮ್ಮಾಪುರ ಸೇರಿದಂತೆ ಎಲ್ಲಾ ಸಚಿವರೂ ಭಾಗಿಯಾಗಲಿದ್ದಾರೆ.

ಪ್ರಸ್ತುತ ರಾಜಕೀಯ ಬೆಳವಣಿಗೆ, ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತಂತೆ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read