BIGG NEWS : `ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯ ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ಅಧಿಕಾರ ಸ್ವೀಕಾರ

ಕಲಬುರಗಿ : ಕಣ್ಣಿಗೆ ಕಾಣುವಂತೆ ಬದಲಾವಣೆಯ ಮ್ಯಾಕ್ರೋ ಯೋಜನೆಗಳನ್ನು ಪ್ರದೇಶದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅಂಟಿಕೊಂಡಿರುವ ಹಿಂದುಳಿದ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ತಮ್ಮ ಮೊದಲ ಗುರಿ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೇವರ್ಗಿ ಶಾಸಕರಾಗಿರುವ ಡಾ.ಅಜಯ್ ಸಿಂಗ್ ಹೇಳಿದರು.

ಸೋಮವಾರ ಮಂಡಳಿ ಕಚೇರಿಯಲ್ಲಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಪ್ರದೇಶದದಲ್ಲಿನ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು, ಅಪೌಷ್ಟಿಕತೆ ನಿವಾರಣೆ,  ತಾಯಿ-ಮಕ್ಕಳ ಮರಣ ಪ್ರಮಾಣ ತಗ್ಗಿಸುವುದರ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುವುದು. ಮೂಲಸೌಕರ್ಯ ಬಲಪಡಿಸುವುದು ತಮ್ಮ ಮೊದಲ ಆದ್ಯತೆಯಾಗಿರಲಿದೆ ಎಂದರು.

ರಾಜ್ಯದ ಈ ಹಿಂದಿನ 175 ತಾಲೂಕುಗಳಲ್ಲಿ 114 ತಾಲೂಕು ಹಿಂದುಳಿದ ತಾಲೂಕುಗಳಾಗಿವೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಸೇರಿರುವುದು 39 ತಾಲೂಕು ಎಂದು ಡಾ.ಡಿ.ಎಂ.ನಂಜುಂಡಪ್ಪ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸ್ಥಾಪನೆ ಮಾಡಲಾಗುವುದು. ರಾಜ್ಯದ ಸಾಕ್ಷರತೆ ಪ್ರಮಾಣ ಶೇ.75.36 ಇದ್ದರೆ, ಕ.ಕ. ಭಾಗದ ಪ್ರಮಾಣ ಶೇ.64 ಇದೆ. ಈ ವ್ಯತ್ಯಾಸವನ್ನು ಸರಿದೂಗಿಸಲು ಪ್ರತಿ ಹೋಬಳಿವಾರು ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಮಂಡಳಿಗೆ ಸರ್ಕಾರ ನೀಡುವ ಅನುದಾನ ಖರ್ಚು ಮಾಡದಿರುವುದು ಮಂಡಳಿಗೆ ದೊಡ್ಡ ಸವಾಲು ಮತ್ತು ಆಪಾದನೆ ಇದೆ. ಇದನ್ನು ತಮ್ಮ ಅವಧಿಯಲ್ಲಿ ಮುಂದುವರೆಯಲು ಬಿಡುವುದಿಲ್ಲ. ಮಂಡಳಿಗೆ ಅಧಿಕಾರಿ-ಸಿಬ್ಬಂದಿ, ಇಂಜಿನೀಯರ್ ಕೊರತೆ ಇರುವುದು ಗಮನಕ್ಕೆ ಬಂದಿದೆ. ಹಣಕಾಸು ಇಲಾಖೆ ಅನುಮೋದನೆ ಪಡೆದು ಸಿಬ್ಬಂದಿ ಭರ್ತಿ ಮಾಡಲಾಗುವುದು. ಮುಂದೆ ಅನುದಾನವನ್ನು ಸಹ ಕಾಲಮಿತಿಯಲ್ಲಿ ಖರ್ಚು ಮಾಡಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read