BIGG NEWS : ರಾಜ್ಯಕ್ಕೆ ಮತ್ತೆ ವಕ್ಕರಿಸಿದ `ಚರ್ಮಗಂಟು’ ರೋಗ : ರೈತರಲ್ಲಿ ಆತಂಕ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾನುವಾರುಗಳ ಚರ್ಮಗಂಟು ರೋಗ ಮತ್ತೆ ಹೆಚ್ಚುತ್ತಿದ್ದು, ರೈತರಿಗೆ ಆತಂಕ ಎದುರಾಗಿದೆ. ಕಳೆದ ವರ್ಷ ಜಾನುವಾರುಗಳ ಚರ್ಮಗಂಟು ರೋಗ ತೀವ್ರವಾಗಿತ್ತು. ಆದರೆ ಈ ಸೆಪ್ಟೆಂಬರ್ ತಿಂಗಳ ಮೊದಲ ವಾರದಿಂದಲೇ ಚರ್ಮಗಂಟು ರೋಗ ಮತ್ತೆ ಕಾಣಿಸಿಕೊಂಡಿದ್ದು, ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ  ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.

ಚರ್ಮಗಂಟು ರೋಗದ ಲಕ್ಷಣಗಳು:

  • ಅತಿಯಾದ ಜ್ವರ ಕಣ್ಣುಗಳಿಂದ ನೀರು ಸೋರುವುದು.
  • ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು
  • ಜಾನುವಾರುಗಳ ಚರ್ಮದ ಮೇಲೆ ೨-೫ ಸೆ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ.
  • ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು.
  • ಮಿಶ್ರತಳಿ ಜರ್ಸಿ,ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ

ರೋಗ ಹರಡುವಿಕೆ:

  • ಸೊಳ್ಳೆ, ಉಣ್ಣೆ , ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ
  • ಕಲುಷಿತಗೊAಡ ನೀರು ಹಾಗೂ ಆಹಾರದಿಂದ
  • ಜಾನುವರುಗಳ ನೇರ ಸಂಪರ್ಕದಿAದ
  • ರೋಗ ಹರಡುವಿಕೆ ಪ್ರಮಾಣ ೧೦-೨೦%ರಷ್ಟು ಹಗೂ ರೋಗದ ಸಾವಿನ ಪ್ರಮಾಣ ೧-೫% ಇರುತ್ತದೆ.

ಚರ್ಮಗಂಟು ರೋಗದ ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ:

  • ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ
  • ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ.
  • ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು
  • ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು
  • ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು
  • ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು
  • ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು
  • ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ ೫-೬ ಬಾರಿ ಕುಡಿಸಬೇಕು
  • ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು
  • ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಫಾರ್ಮಾಲಿನ್(೧%)ಫಿನೈಲ್(೨%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (೨%) ದಿನಕ್ಕೆ ೨ ಬಾರಿ ಸಿಂಪಡಿಸಬೇಕು
  • ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು.
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read