HomeKarnatakaBIGG NEWS : ನಟ ಉಪೇಂದ್ರರನ್ನು 5 ವರ್ಷ ಬ್ಯಾನ್ ಮಾಡಿ : ಫಿಲ್ಮ್ ಚೇಂಬರ್...

BIGG NEWS : ನಟ ಉಪೇಂದ್ರರನ್ನು 5 ವರ್ಷ ಬ್ಯಾನ್ ಮಾಡಿ : ಫಿಲ್ಮ್ ಚೇಂಬರ್ ಗೆ ಮನವಿ!

ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಲಾಗಿದೆ.

ನಟ ಉಪೇಂದ್ರ  ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿ ಕಾರ್ಯಕರ್ತರು ಉಪೇಂದ್ರ ಅವರನ್ನು ಬ್ಯಾನ್  ಮಾಡುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಇಂದು ಹೈಕೋರ್ಟ್ ನಲ್ಲಿ ನಟ ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿದೆ.

ಈ ನಡುವೆ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ಸದಾಶಿವನಗರದಲ್ಲಿರುವ ನಟ ಉಪೇಂದ್ರ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular