BIGG NEWS : ಅಕ್ರಮ ‘ಮೊಬೈಲ್ ಟವರ್’ ಗಳಿಗೆ ದಂಡ ವಿಧಿಸಿ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳುರು : ಅಕ್ರಮ ಮೊಬೈಲ್ ಟವರ್ ಗಳಿಗೆ ದಂಡ ವಿಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅಕ್ರಮವಾಗಿ ಟವರ್ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅಕ್ರಮ ಮೊಬೈಲ್ ಟವರ್ಗಳಿಗೆ ದಂಡ ವಿಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. . ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಇನ್ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಶನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ.ವರೆಗೆ, ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ, ನಗರ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಪಂಚಾಯ್ತಿ ಮಿತಿಗಳಲ್ಲಿ 35,000 ರೂ. ಇನ್ಸ್ಟಾಲೇಶನ್ ಚಾರ್ಜಸ್ ವಿಧಿಸಬಹುದಾಗಿದೆ.

ಅಕ್ರಮವಾಗಿ ಟವರ್ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು, ಇದರಿಂದ ಸರ್ಕಾರಕ್ಕೆ ಬೊಕ್ಕಸಕ್ಕೆ ನಷ್ಟವಾಗುತ್ತಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read