BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇದುವರೆಗೆ ನನಗೆ ವಿಶೇಷವಾಗಿ ಏನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನಿರ್ಧಾರ ಮಾಡ್ತಾರೆ. ನನಗೆ ಇದುವರೆಗೆ ವಿಶೇಷವಾಗಿ ಏನೂ ಗೊತ್ತಿಲ್ಲ, ಸದ್ಯಕ್ಕೆ ನಾನು ದೆಹಲಿಗೆ ಹೋಗುತ್ತಿಲ್ಲ ಎಂದರು.

ಸಿದ್ದರಾಮಯ್ಯ ಈ ಹಿಂದೆ ಬಿಜೆಪಿ ಸೇರಲು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಭೇಟಿಯಾಗಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಆದೆಲ್ಲಾ ಏನೂ ಇಲ್ಲ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read