HomeKarnatakaBIGG NEWS : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ` ವಿಪಕ್ಷ ನಾಯಕ’ ಸ್ಥಾನ ವಿಚಾರ :...

BIGG NEWS : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ` ವಿಪಕ್ಷ ನಾಯಕ’ ಸ್ಥಾನ ವಿಚಾರ : ಆಯನೂರು ಮಂಜುನಾಥ್ ಮಹತ್ವದ ಹೇಳಿಕೆ

ಶಿವಮೊಗ್ಗ: ಜುಲೈ 28ರ ನಂತರ ರಾಜಕೀಯ ವಾತಾವರಣ ಬದಲಾಗಲಿದೆ. ಜೆಡಿಎಸ್ ಪಕ್ಷಕ್ಕೆ ಕಡಿಮೆ ಸ್ಥಾನ ಬಂದಿದ್ದರೂ, ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗಿ ವಿಜೃಂಭಿಸುತ್ತಿದ್ದು, ಅಧಿಕೃತ ವಿಪಕ್ಷ ನಾಯಕರಾಗುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಆಯನೂರು ಮಂಜುನಾಥ್ ಹೇಳಿದ್ದಾರೆ.

ಜು. 28ರಂದೇ ಕುಮಾರಸ್ವಾಮಿ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನು ಒಪ್ಪಿಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿವೆ. ಕಾಂಗ್ರೆಸ್ ನಾಯಕರು ಕೂಡ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹಳ ಕಡಿಮೆ ಸ್ಥಾನ ದೊರೆತಿದೆ. ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ವಿಜೃಂಭಿಸುತ್ತಿದ್ದಾರೆ. ಜುಲೈ 28ರ ನಂತರ ಅಧಿಕೃತ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಬಂದಿದೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular