HomeKarnatakaBIGG NEWS : `ಬಿಜೆಪಿ-ಜೆಡಿಎಸ್’ ಮೈತ್ರಿ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಸ್ಪೋಟಕ ಹೇಳಿಕೆ

BIGG NEWS : `ಬಿಜೆಪಿ-ಜೆಡಿಎಸ್’ ಮೈತ್ರಿ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಆದರೆ ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ದರೆ ಎರಡು ಪಕ್ಷಗಳ ಮಧ್ಯೆ ಸಂಘರ್ಷವಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈತ್ರಿ ಎಂದರೆ ಕಾರ್ಯಕರ್ತರ ಮಧ್ಯೆ ಸಾಮರಸ್ಯವಿರಬೇಕು. ಆದರೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಸಂಘರ್ಷವಿದೆ. ಈ ಹಿಂದೆ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಡದೇ ಮೋಸ ಮಾಡಿದ ವಚನಭ್ರಷ್ಟರೊಂದಿಗೆ ಮೈತ್ರಿ ಎಷ್ಟು ಸರಿ ಎಂದು ಜನ ಕೇಳುತ್ತಿದ್ದಾರೆ. ಇಂತಹ ಮೈತ್ರಿ ಸಾಮರಸ್ಯ ಆಗಲ್ಲ. ಇದು ಇನ್ನಷ್ಟು ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ತಿಳಿ ಹೇಳಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular