BIGG NEWS : ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ : ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ನರೇಗಾ ಕೂಲಿಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ನರೇಗಾ ವೈಯಕ್ತಿಕ ಕಾಮಗಾರಿಗಳಿಗೆ ನೀಡುತ್ತಿದ್ದ 2.50 ಲಕ್ಷ ರೂ. ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ನರೇಗಾದಡಿ ವೈಯಕ್ತಿಕ ಕಾಮಗಾರಿ ಮೊತ್ತ ಹೆಚ್ಚಿಸುವ ಮೂಲಕ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ಉತ್ತಮಪಡಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಬುಡಕಟ್ಟುಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಜ್ಞಾಪನಾ ಪತ್ರದಲ್ಲಿ ತಿಳಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read