HomeKarnatakaBIGG NEWS : ಸರ್ಕಾರ ಪತನ, 2024 ರಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಖಚಿತ :...

BIGG NEWS : ಸರ್ಕಾರ ಪತನ, 2024 ರಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಖಚಿತ : ಮಾಜಿ ಸಿಎಂ `HDK’ ಭವಿಷ್ಯ!

ರಾಮನಗರ : ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು,  ಜೋಡೆತ್ತು ಎಂದು ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರವನ್ನು ಬೀಳಿಸಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಕಾಂಗ್ರೆಸ್ ಸರ್ಕಾರವು ಶೀಘ್ರವೇ ಪತನವಾಗಲಿದೆ. ಡಿ.ಕೆ. ಶಿವಕುಮಾರ್ ಅವರು ಮತ್ತೆ ತಿಹಾರ್ ಜೈಲಿಗೆ ಹೋಗುತ್ತಾರೆ. ಈ ಸರ್ಕಾರದ ಆಂತರಿಕ ಕಲಹದಿಂದ ಕುಸಿದು ಬೀಳಲಿದೆ. 2024ರಲ್ಲಿ ರಾಜ್ಯದಲ್ಲಿ  ವಿಧಾನಸಭೆ ಚುನಾವಣೆ ನಡೆಯುವುದು ಖಚಿತ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular