HomeKarnatakaBIGG NEWS : ಕಲ್ಲುಗಣಿ ಗುತ್ತಿಗೆ ಉತ್ಪನ್ನ ಸಾಗಣಿಕೆ ವಾಹನಗಳಿಗೆ `GPS’ ಕಡ್ಡಾಯ

BIGG NEWS : ಕಲ್ಲುಗಣಿ ಗುತ್ತಿಗೆ ಉತ್ಪನ್ನ ಸಾಗಣಿಕೆ ವಾಹನಗಳಿಗೆ `GPS’ ಕಡ್ಡಾಯ

ದಾವಣಗೆರೆ : ಕಲ್ಲುಗಣಿ ಗುತ್ತಿಗೆಗಳ ವಾಹನಗಳಲ್ಲಿ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಟ್ ಸಮಿತಿ ಸಭೆ, ಜಿಲ್ಲಾ ಮರಳು ಸಮಿತಿ ಹಾಗೂ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾವಣಗೆರೆ ಜಿಲ್ಲೆಯ ಪಕ್ಕದ ವಿಜಯನಗರ, ಹಾವೇರಿ ಹಾಗೂ ಇತರ ಜಿಲ್ಲೆಗಳಿಂದ ದಾವಣಗೆರೆ ಜಿಲ್ಲೆಗೆ ಆಗಮಿಸುವ ಕಲ್ಲು ಗಣಿ ಗುತ್ತಿಗೆಗಳ ಟ್ರ್ಯಾಕ್ಟರ್, ಲಾರಿ ಇನ್ನಿತರ ಯಾವುದೇ ವಾಹನವಾಗಿರಲಿ ಅದರಲ್ಲಿ ಜಿ.ಪಿ.ಎಸ್ ಅನ್ನು ಹೊಂದಿರಬೇಕು, ಜಿ.ಪಿ.ಎಸ್ ಇಲ್ಲದಿರುವ ವಾಹನಗಳಲ್ಲಿ ಸಾಗಾಣಿಕೆ ಕಲ್ಲು, ಮರಳು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಧಿಕೃತ ಕಲ್ಲು ಗಣಿಗಾರಿಕೆ, ಸಾಗಾಣಿಕೆಗಳು ಹೆಚ್ಚಾಗಿ ಜಿಲ್ಲೆಯ ಹೊನ್ನಾಳಿ, ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ರಚಿತವಾಗಿರುವ ಚಾಲಿತ ತನಿಖಾ ದಳಗಳನ್ನು ಹೆಚ್ಚು ಜಾಗೃತವಹಿಸುವಂತೆ ಪೆÇಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿರುವ ಮರಳು ಬ್ಲಾಕ್‍ಗಳನ್ನು ಗುರುತಿಸಿ, ಆ ಪ್ರದೇಶದಲ್ಲಿ ಮಣ್ಣನ್ನು ಹೊರ ತೆಗೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದರು.

ಉಪವಿಭಾಗಾಧಿಕಾರಿ ದುರ್ಗಾಶ್ರೀ ಮಾತನಾಡಿ ಪಟ್ಟಾ ಅಥವಾ ಸರ್ಕಾರಿ ಜಮೀನುಗಳಲ್ಲಿ ನಿಯಮದಂತೆ 3 ಅಡಿ ಮಣ್ಣನ್ನು ತೆಗೆಯಲು ಅವಕಾಶವಿದೆ. ಆದರೆ ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 10 ಅಡಿಗಿಂತ ಆಳವಾಗಿ ಮಣ್ಣನ್ನು ಅಗೆದಿರುವುದು ಕಂಡು ಬಂದಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ವೇಳೆ ಜಿಲ್ಲಾಧಿಕಾರಿಯವರು ಹರಿಹರ ತಾಲ್ಲೂಕಿನಲ್ಲಿ ಇಟ್ಟಿಗೆ ತಯಾರಿಸುವ ಘಟಕಗಳಿದ್ದು, ಅವರು ಇಟ್ಟಿಗೆ ತಯಾರಿಸಲು ಅವಶ್ಯಕವಾದ ಮಣ್ಣನ್ನು ತೆಗೆದುಕೊಳ್ಳಲು ನಿರ್ದಿಷ್ಟವಾದ ಗೋಕಟ್ಟೆ, ಕೆರೆ ಪ್ರದೇಶಗಳನ್ನು ನಿಗಧಿಪಡಿಸಿ ಹಾಗೂ ನಗರ ಪ್ರದೇಶದ ಪಟ್ಟಾ ಜಾಗಗಳಲ್ಲಿ 3 ಅಡಿ ಮಣ್ಣನ್ನು ಹಾಗೂ ಕೆರೆ ಪ್ರದೇಶಗಳಲ್ಲಿ 3 ಅಡಿಗಿಂತ ಹೆಚ್ಚು ಮಣ್ಣನ್ನು ತೆಗೆದುಕೊಳ್ಳದಂತೆ ಸೂಚನೆ ನೀಡಲು ತಿಳಿಸಿದರು.

ವಾಹನದ ಸಾಮಥ್ರ್ಯಕ್ಕೆ ಅನುಗುಣವಾಗಿ ಕಲ್ಲು, ಮಣ್ಣು ಖನಿಜಗಳನ್ನು ಲೋಡ್ ಮಾಡದೇ, ಹೆಚ್ಚಿನ ಪ್ರಮಾಣದಲ್ಲಿ ಕಲ್ಲು, ಮಣ್ಣು ಇತರೆ ಖನಿಜಗಳನ್ನು ಸಾಗಿಸುುವ ವಾಹನಗಳನ್ನು ಪರಿಶೀಲಿಸಿ, ಅಂತಹ ವಾಹನಗಳ ಮೇಲೆ ನಿಯಮಾನುಸಾರ ದಂಡ ವಿಧಿಸಿ ಎಂದರು. ಈಗಾಗಲೇ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ತ್ವರಿತವಾಗಿ ವಿಲೇವಾರಿ ಮಾಡಲು ತಿಳಿಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular