BIGG NEWS : ನನ್ನ ಕ್ಷೇತ್ರಕ್ಕೆ ನೀರು ಹರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತ್ತಿ : `ಕೈ’ ಶಾಸಕ ಯಶವಂತರಾಯೇಗೌಡ

ವಿಜಯಪುರ : ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಈ ನಡುವೆ ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರಕ್ಕೆ ನೀರು ಹರಿಸದೇ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಯಶವಂತರಾಯೇಗೌಡ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕರು, ನನ್ನ ಕ್ಷೇತ್ರದ ಹಳ್ಳಿಗಳಿಗೆ ನೀರು ಇಲ್ಲದೇ ರೈತರು, ಜನರು ಸಂಕಷ್ಟಕ್ಕೀಡಾಗಿದ್ದಾರೆ.  ನನ್ನ ಕ್ಷೇತ್ರದ ಹಳ್ಳಿಗಳಿಗೆ ಆದಷ್ಟು ಬೇಗ ನೀರು ಬಿಡದೇ ಹೋದರೆ  ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದಲ್ಲಿ ಮಳೆ ಇಲ್ಲದೇ ಬರ ಆವರಿಸಿದೆ ಕುಡಿಯಲೂ ನೀರಿನ ಸಮಸ್ಯೆಯಾಗುತ್ತಿದೆ. ನನ್ನ ಕ್ಷೇತ್ರದ ಜನರು ನೀರು ಇಲ್ಲದೇ ಸಂಕಷ್ಟದಲ್ಲಿದ್ದಾರೆ. ಕೂಡಲೇ ಸರ್ಕಾರ ನೀರು ಹರಿಸಬೇಕು. ಇಲ್ಲದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read