BIGG NEWS : ಶೀಘ್ರವೇ `ಜಾತಿ ಸಮೀಕ್ಷೆ ವರದಿ’ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ ಸ್ಪಷ್ಟನೆ

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015ರ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ನವೆಂಬರ್ 25 ಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನನ್ನ ಅವಧಿ ಮುಗಿಯುತ್ತಿದ್ದು, ಸರ್ಕಾರಕ್ಕೆ ಜಾತಿ ಸಮೀಕ್ಷೆ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಕೆ. ಜಯಪ್ರಕಾಶ್ ಹೆಗ್ಡೆ ಅವರ ಮೂರು ವರ್ಷಗಳ ಅಧಿಕಾರವಾಧಿ ನವೆಂಬರ್ 25 ಕ್ಕೆ ಮುಗಿಯಲಿದ್ದು, , ಅಷ್ಟರ ಒಳಗೆ ವರದಿಯನ್ನು ಸಲ್ಲಿಸಲು ಮುಂದಾಗಿದ್ದು, ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆ ನಡೆಸಿದೆ. ಆ ಸಮೀಕ್ಷೆಯ ಸಂದರ್ಭದಲ್ಲಿ ಸಂಗ್ರಹಿಸಿರುವ ಅಂಕಿ ಅಂಶಗಳನ್ನು ತಜ್ಞರ ಸಮಿತಿ ನೆರವಿನಿಂದ ವಿಶ್ಲೇಷಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read