HomeKarnatakaBIGG NEWS : `ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ

BIGG NEWS : `ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು `KEA’ ಅನುಮತಿ

ಬೆಂಗಳೂರು : ಅಕ್ಟೋಬರ್ 28 ಮತ್ತು 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ನಡೆಯಲಿರುವ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹಾಜರಾಗುವ ವಿಚಾರ ಭಾರೀ ಸಂಘರ್ಷಕ್ಕೆ ಕಾರಣವಾಗಿತ್ತು. ಇದೀಗ ಕೆಇಎ ವಿವಿಧ ನಿಗಮ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಇ ಹಾಜರಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು  ಕೆಇಎ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್  ಅಳತೆಯ 2 ಫೋಟೋ, ಸರ್ಕಾರದ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular