HomeKarnatakaBIGG NEWS : ರಾಜ್ಯಾದ್ಯಂತ `ಮದ್ರಾಸ್ ಐ’ ಸೋಂಕಿನ ಅಬ್ಬರ : ಹಾವೇರಿ ಜಿಲ್ಲೆಯಲ್ಲಿ ಅತಿ...

BIGG NEWS : ರಾಜ್ಯಾದ್ಯಂತ `ಮದ್ರಾಸ್ ಐ’ ಸೋಂಕಿನ ಅಬ್ಬರ : ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ ದಾಖಲು!

ಹಾವೇರಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮದ್ರಾಸ್ ಐ ಪ್ರಕರಣ ಹೆಚ್ಚುತ್ತಿದೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕೋವಿಡ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ ಅಪಖ್ಯಾತಿಗಳಿಸಿದ್ದ ಹಾವೇರಿ ಬಳಿಕ ಲಿಂಪಿ ಸ್ಕಿನ್ ಕಾಯಿಲೆಯಿಂದ ದನ ಕರುಗಳ ಸಾವಿನ ಸಂಖ್ಯೆಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ರೈತರ ಆತ್ಮಹತ್ಯೆ ಪ್ರಕರಣದಲ್ಲೂ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಮದ್ರಾಸ್ ಐ ಪ್ರಕರಣದಲ್ಲಿ ರಾಜ್ಯದಲ್ಲಿ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 64,506 ಮದ್ರಾಸ್ ಐ ಕೇಸ್ ಪತ್ತೆಯಾಗಿದ್ದು, ಅವುಗಳ ಪೈಕಿ 9,901 ಪ್ರಕರಣಗಳು ಹಾವೇರಿ ಜಿಲ್ಲೆಯೊಂದರಲ್ಲೇ ಪತ್ತೆಯಾಗಿವೆ. ಬೀದರ್ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದು, ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಮದ್ರಾಸ್ ಐ ಪ್ರಕರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿವೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಜನರು ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಮದ್ರಾಸ್ ಐ ಸೋಂಕಿನ ಲಕ್ಷಣಗಳು

ಕಸ ಬಿದ್ದದಂತೆಆಗುವ ರೀತಿಯಾಗಿಕಣ್ಣುಚುಚ್ಚುವುದು, ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು (ಪಿಚ್ಚು) ಬರುತ್ತದೆ, ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು, ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ಕಂಡು ಬರುತ್ತದೆ.

ಮುಂಜಾಗೃತಾ ಕ್ರಮಗಳು

ಸಮಸ್ಯೆ ಇರುವವರು ಕೆಲದಿನ ಪ್ರತ್ಯೇಕ ವಾಸ ಮಾಡಿ, ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ, ಕಣ್ಣಿಗೆಔಷಧ ಹಾಕಿಸಿಕೊಳ್ಳಬೇಡಿ, ದಿನಕ್ಕೆ 8-10 ಬಾರಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆದುಕೊಳ್ಳಿ, ವೈರಸ್ ಕಾಣಿಸಿಕೊಂಡಾಗ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಪಡೆಯಬೇಕು, ವೈದ್ಯರ ತಪಾಸಣೆ ಮಾಡಿಸದೇ, ಔಷಧಿ ಅಂಗಡಿಗಳಲ್ಲಿ ಸಿಗುವ ಡ್ರಾಪ್ಸ್‍ಗಳನ್ನು ಬಳಸಬಾರದು, ಕಣ್ಣು ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.

ಪರಿಹಾರ

ಸಮಸ್ಯೆ ಉಳ್ಳವರು ಇತರರಿಂದದೂರಇರಬೇಕು, ವೈದ್ಯರ ಬಳಿ ತೋರಿಸಿ, ಐ ಡ್ರಾಪ್ಸ್ ಮಾತ್ರ ಹಾಕಬೇಕು, ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು, ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ,ಮೊಬೈಲ್, ಕಂಪ್ಯೂಟರ್‍ಗಳನ್ನು ನೋಡುವುದನ್ನ ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿಕೊಡಬೇಕು.

ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾಆಸ್ಪತ್ರೆಗೆ ಭೇಟಿ, ವೈದ್ಯರ ಹತ್ತಿರತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮುನ್ನೆಚ್ಚರಿಕೆಯೇ ಮದ್ದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular