BIGG NEWS : ರಾಜ್ಯದ ಎಲ್ಲಾ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ `ಮಾಂಗಲ್ಯ ಭಾಗ್ಯ’ ಯೋಜನೆ ವಿಸ್ತರಣೆ

ಬೆಂಗಳೂರು :  ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಾಂಗಲ್ಯ ಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಎ ಮತ್ತು ಬಿ ಗ್ರೇಡ್ ದೇವಾಲಯಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ  ಬಡ ವರ್ಗದ ವಧು-ವರರ ಸರಳ ವಿವಾಹಕ್ಕೆ ಸಿದ್ದರಾಗಿರುವವರಿಗೆ ಅನ್ನಭಾಗ್ಯದಂತೆ ಮಾಂಗಲ್ಯ ಭಾಗ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮಾಂಗಲ್ಯ ಭಾಗ್ಯ ಯೋಜನೆಯಡಿ ವರನಿಗೆ ಅಂಗಿ, ಧೋತಿ ಹಾಗೂ 5,000 ರೂ. ನಗದು ಮತ್ತು 8 ಗ್ರಾಂ. ಚಿನ್ನದ ತಾಳಿ ಗುಂಡುಗಳನ್ನು ನೀಡಲಾಗುತ್ತದೆ. ಜೊತೆಗೆ ರಾಜ್ಯದ ಎಲ್ಲಾ ಎ, ಬಿ ಗ್ರೇಡ್ ದೇವಾಲಯಗಳಲ್ಲಿ ಯೋಜನೆ ಜಾರಿಗೆ ತರಲಾಗುತ್ತಿದೆ.

2023 ರ  ನವೆಂಬರ್, ಡಿಸೆಂಬರ್ ಮತ್ತು 2024 ರ ಜನವರಿಯಲ್ಲಿ ಸಾಮೂಹಿಕ ವಿವಾಹಕ್ಕಾಗಿ ವಧು-ವರರ ಹೆಸರು ನೋಂದಾಯಿಸಿಕೊಳ್ಳಲು ಸುತ್ತೋಲೆ ಹೊರಡಿಸಲಾಗಿದೆ. ನವೆಂಬರ್ ತಿಂಗಳಿನಲ್ಲಿ 16,19 ಮತ್ತು 29 ರಂದು ದಿನಾಂಕಗಳನ್ನು ಫಿಕ್ಸ್ ಮಾಡಲಾಗಿದೆ. ಡಿಸೆಂಬರ್ 7, 10 ರಂದು, 2024 ರ ಜನವರಿ 28 ಮತ್ತು 31 ರಂದು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read