HomeKarnatakaBIGG NEWS : ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ...

BIGG NEWS : ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, ಚುನಾವಣೆಗೂ ಮುನ್ನ ನಂದಿನಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಇಂದು ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ.  ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರಕ್ಕೆ ಬಂದಾಗ ಲಾಭ-ನಷ್ಟದ ಲೆಕ್ಕ ಹೇಳುವ ಕಾಂಗ್ರೆಸ್‌ ಇದೇ ಸೂತ್ರವನ್ನು ಇತರ ಧರ್ಮಗಳಿಗೆ ಅನ್ವಯಿಸಲು ಒಪ್ಪುವುದಿಲ್ಲ. ಹಿಂದೂಗಳೆಡೆಗೆ ತಾತ್ಸಾರ ತಮ್ಮ ಜಾತ್ಯಾತೀತ ಸೂತ್ರ ಎಂಬುದನ್ನು ಸಿದ್ದರಾಮಯ್ಯ ಅವರು ಈಗ ಮತ್ತೆ ರುಜುವಾತು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular