BIGG NEWS: ನಾನು `ಹುಲಿ ಉಗುರು’ ಧರಿಸಿರುವುದು ಸತ್ಯಕ್ಕೆ ದೂರ : ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ಮದುವೆಯ ಸಮಯದಲ್ಲಿ ಹುಲಿ ಉಗುರು ಧರಿಸಿದ್ದರು ಎಂಬುದರ ಕುರಿತಂತೆ ನಿಖಿಲ್ ಕುಮಾರಸ್ವಾಮಿ ಅವರೇ  ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವರ್ತೂ ಅರಣ್ಯ ಅಧಿಕಾರಿಗಳು ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಅವರನ್ನು ಬಿಗ್‌ ಬಾಸ್‌ ಮನೆಯಿಂದಲೇ ಬಂಧಿಸಿ ನ್ಯಾಯಾಲಯದ ಆದೇಶದಂತೆ ವರ್ತೂರು ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read