BIGG NEWS : ಎಲ್ಲಾ ʻವರ್ಗಾವಣೆʼಗಳಿಗೂ ‘ಕಾರಣ’ ಕಡ್ಡಾಯವಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಸಾಮೂಹಿಕವಾಗಿ ಅಥವಾ ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಪ್ರತಿಯೊಬ್ಬರ ವರ್ಗಾವಣೆಗೂ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ವರ್ಗಾವಣೆ ಮಾಡಿದ ಸರ್ಕಾರದ ಕ್ರಮ ಪುರಸ್ಕರಿಸಿದ ಕೆಎಟಿ ಆದೇಶ ರದ್ದು ಕೋರಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿದ್ದ ಎಸ್ ಎಸ್ ವೀಣಾ ಹಾಗೂ ಇತರೆ ಅಧಿಕಾರಿಗಳು ಸಲ್ಲಿಸಿದ್ದಂತ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗಿಯ ಪೀಠವು ಈ ಆದೇಶ ನೀಡಿದೆ.

ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯದೇ ಮತ್ತು ಸಕಾರಣ ನೀಡದೆ ತಮ್ಮನ್ನು ವರ್ಗಾಯಿಸಿರುವುದು ಕಾನೂನು ಬಾಹಿರ ಕ್ರಮ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿರುವ ಹೈಕೋರ್ಟ್‌ ಪ್ರತಿಯೊಬ್ಬರ ವರ್ಗಾವಣೆಗೂ ಸರ್ಕಾರ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದೆ.

ಸಾಮೂಹಿಕ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪ್ರತಿಯೊಬ್ಬ ಅಧಿಕಾರಿಯ ವರ್ಗಾವಣೆಗೂ ಕಾರಣ ಉಲ್ಲೇಖಿಸಲು ಕಷ್ಟವಾಗುತ್ತದೆ. ಕಾರಣ ಉಲ್ಲೇಖಿಸಲು ಕಷ್ಟವಾಗುತ್ತದೆ. ಪ್ರತಿಯೊಬ್ಬ ಅಧಿಕಾರಿಯೂ ವರ್ಗಾವಣೆಗೂ ಕಾರಣ ನಮೂದಿಸಬೇಕಾದ ಅನಿವಾರ್ಯತೆ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read