BIGG NEWS : ರಾಜ್ಯದಲ್ಲಿ ವೈದ್ಯರಿಗೆ `ಗ್ರಾಮೀಣ ಸೇವೆ ಕಡ್ಡಾಯವಲ್ಲ’ : ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು : ರಾಜ್ಯದಲ್ಲಿ ಎಂಬಿಬಿಎಸ್  ಪದವಿ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯವಲ್ಲ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯವಲ್ಲ. ಈ ಸಂಬಂಧ ತಿದ್ದುಪಡಿ ಮಾಡಿ, ಸುಗ್ರೀವಾಜ್ಞೆ  ಹೊರಡಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಎಂಬಿಬಿಎಸ್ ಮತ್ತು ಮೆಡಿಕಲ್ ಪಿಜಿ ಅಭ್ಯರ್ಥಿಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶದ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸು ನಿಯಮ ಜಾರಿಯಲ್ಲಿತ್ತು. ಆದರೆ ಇದೀಗ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯವನ್ನು ಕೈಬಿಡಲಾಗಿದೆ.

ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಎಲ್ಲ ಹುದ್ದೆಗಳನ್ನು 2 ತಿಂಗಳೊಳಗೆ ಭರ್ತಿ ಮಾಡಲಾಗುವುದು. ಕೌನ್ಸಿಲಿಂಗ್ ಮೂಲಕ ಮೆರಿಟ್ ಆಧಾರದಲ್ಲಿ ಎಂಬಿಬಿಎಸ್ ಮತ್ತು ಪಿಜಿ ಪೂರ್ಣಗೊಂಡ ಅಭ್ಯರ್ಥಿಗಳ ನೇಮಕ ಮಾಡಲಾಗುವುದು ಎಂದು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read