BIGG NEWS : ಸೌಜನ್ಯ ಕೇಸ್ ಮರು ತನಿಖೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಡುವ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಬೇಕೆಂದು ವಿವಿಧ ಸಂಘಟನೆಗಳ ಸದಸ್ಯರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಮರುತನಿಖೆಗೆ ಎಸ್ ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

2012,ಅಕ್ಟೋಬರ್ 9 ರಂದು ನಡೆದಿದ್ದ ಸೌಜನ್ಯ ಹತ್ಯೆ ಕುರಿತಂತೆ ಇದೀಗ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ೨೦ ಕ್ಕೂ ಹೆಚ್ಚು ಸಂಘಟನೆಗಳು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read