BIGG NEWS : 2024 ನೇ ಸಾಲಿನ `SSLC’ ಪರೀಕ್ಷೆ-1 : ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು : 2024ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಶಾಲಾ/ ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

2024ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಹೊರಡಿಸಲಾಗಿರುತ್ತದೆ.

ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು 15-11-2023 ರವರೆಗೆ ವಿಸ್ತರಣೆ ಮಾಡಲಾಗಿದೆ.

ಮೇಲೆ ವಿವರಿಸಿರುವಂತೆ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read