BIGG NEWS : ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ `ಶತದಿನ’ದ ಸಂಭ್ರಮ : 4 ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆಗಸ್ಟ್ 27 ರ ಇಂದಿಗೆ 100 ದಿನದ ಸಂಭ್ರಮ, ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳ ಪೈಕಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ರಾಜ್ಯಾದ್ಯಂತ ಜನರಿಂದಲೂ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಅಧಿಕಾರಕ್ಕೆ ಬಂದ ಬಳಿಕ ಮೊದಲ ಗ್ಯಾರಂಟಿ ಯೋಜನೆಯಾದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. ರಾಜ್ಯಾದ್ಯಂತ ಶಕ್ತಿ ಯೋಜನೆ ಭರ್ಜರಿ ಯಶಸ್ವಿಯಾಗಿದೆ.

ಶಕ್ತಿ ಯೋಜನೆ ಬಳಿಕ ಕಾಂಗ್ರೆಸ್ ಸರ್ಕಾರವು 2 ನೇ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದು, ಈಗಾಗಲೇ ಸರಿಸುಮಾರು ಶೇ. 98 ರಷ್ಟು ಕುಟುಂಬಗಳಿಗೆ ಮಾಸಿಕ ಸರಾಸರಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.

ರಾಜ್ಯ ಸರ್ಕಾರದ 3 ನೇ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿದೆ. ಆದರೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಬದಲು ಉಳಿದ 5 ಕೆಜಿ ಅಕ್ಕಿಯ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಆಗಸ್ಟ್ 30 ರಂದು ಯಜಮಾನಿಯರ ಖಾತೆಗೆ 2,000 ಹಣ ವರ್ಗಾವಣೆ ಮಾಡಲಾಗುತ್ತದೆ.

ಡಿಪ್ಲೋಮಾ, ಪದವೀದರ ನಿರುದ್ಯೋಗಿಗಳಿಗೆ 1,500 ರೂ, 3000 ರೂ. ಭತ್ಯೆ ನೀಡುವ ಯುವನಿಧಿ ಯೋಜನೆಗೆ ಶೀಘ್ರವೇ ಚಾಲನೆ ನೀಡುವ ಸಾಧ್ಯತೆ ಇದೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ 5 ಗ್ಯಾರಂಟಿ ಯೋಜನೆಗಳ ಪೈಕಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read