ಶೀಘ್ರವೇ `ರಾಜ್ಯ ಶಿಕ್ಷಣ ನೀತಿ’ ಜಾರಿ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್|State Education Policy

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯದ್ದೇ ಹೊಸ ಶಿಕ್ಷಣ ನೀತಿ ರೂಪಿಸಿಕೊಳ್ಳಲು ಅಗತ್ಯ ರೂಪುರೇಷೆಗಳ ಪ್ರಸ್ತಾವನೆ ಸಿದ್ದಪಡಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಸಚಿವ ಡಾ.ಎಂ.ಸಿ. ಸುಧಾಕರ್ ಸೂಚನೆ ನೀಡಿದ್ದಾರೆ.

ಹೊಸ ಶಿಕ್ಷಣ ನೀತಿ ಜಾರಿ ಸಂಬಂಧ ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಮಧುಬಂಗಾರಪ್ಪ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರಾಜ್ಯದ ಹೊಸ ಶಿಕ್ಷಣ ನೀತಿ ರೂಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಶೀಘ್ರವೇ ಸಭೆ ಕರೆಯಲಿದ್ದು, ಈ ಸಭೆಯಲ್ಲಿ ಹೊಸ ಶಿಕ್ಷಣ ನೀತಿಯ ಬಗ್ಗೆ ರೂಪುರೇಷೆಗಳ ಪ್ರಸ್ತಾವನೆಗಳನ್ನು ಸಲ್ಲಿಸಬೇಕಿದೆ ಎಂದರು.

ಸಿಎಂ ಜೊತೆಗೆ ನಡೆಯುವ ಸಭೆಯಲ್ಲಿ ಹೊಸ ಶಿಕ್ಷಣ ನೀತಿ ಸಂಬಂಧ ಪ್ರಸ್ತಾವನೆಯಲ್ಲಿನ ಅಂಶಗಳನ್ನು ಚರ್ಚಿಸಿ ಹೊಸ ನೀತಿ ತಯಾರು ಮಾಡಲು ಸಮಿತಿ ರಚನೆ ಸೇರಿದಂತೆ ಇನ್ನಿತರ ನಿರ್ಧಾರಗಳನ್ನು ಸಿಎಂ ಸಲಹೆ ಸೂಚನೆಯಂತೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read